ಹೈದರಾಬಾದ್: 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ರಾಜ್ಯದಾದ್ಯಂತ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದ್ದು, 11ರ ವರೆಗೆ ಶೇ 20.64ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕರ್ತರ ನಡುವೆ ಘರ್ಷಣೆ:

ರಂಗಾರೆಡ್ಡಿ ಜಿಲ್ಲೆಯ ಬೂತ್ನಲ್ಲಿ ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಆರ್ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಿಆರ್ಎಸ್ ಎಲ್ಲಾ 119 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಹಾಗೂ ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಕ್ರಮವಾಗಿ 111 ಮತ್ತು 8 119 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
.ತೆಲಂಗಾಣ ವಿಧಾನಸಭೆ ಚುನಾವಣೆ 2023: ಮತದಾನ ಆರಂಭ.
ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಸಿಪಿಐಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಉಳಿದಂತೆ 118 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ರಾಜ್ಯದ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಮುಖ್ಯಮಂತ್ರಿ ಚಂದ್ರಶೇಖರ್ ರಾವ್, ಇವರ ಪುತ್ರ ಕೆ.ಟಿ ರಾಮರಾವ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ, ಬಿಜೆಪಿಯ ಲೋಕಸಭಾ ಸದಸ್ಯ ಬಂಡಿ ಸಂಜಯ್ ಕುಮಾರ್ ಹಾಗೂ ಡಿ.ಅರವಿಂದ್ ಚುನಾವಣಾ ಕಣದಲ್ಲಿರುವ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು.

ಸ್ವಗ್ರಾಮದಲ್ಲಿ ಮತ ಚಲಾಯಿಸಿದ ಸಿಎಂ:

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಅವರ ಪತ್ನಿ ಶೋಭಾ ಅವರು ಸಿದ್ದಿಪೇಟ್ ಜಿಲ್ಲೆಯ ಸ್ವಗ್ರಾಮದಲ್ಲಿ ಮತ ಚಲಾಯಿಸಿದರು.

ಮತ ಚಲಾಯಿಸಿದ ಜೂನಿಯರ್ ಎನ್ಟಿಆರ್, ಅಲ್ಲು ಅರ್ಜುನ್

ಹೈದರಾಬಾದ್ನ ಪಿಓಬುಲ್ ರೆಡ್ಡಿ ಪಬ್ಲಿಕ್ ಸ್ಕೂಲ್ನಲ್ಲಿ ನಟ ಜೂನಿಯರ್ ಎನ್ಟಿಆರ್ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ನಟ ಅಲ್ಲು ಅರ್ಜುನ್ ನಗರದ ಜುಬಿಲಿ ಹಿಲ್ಸ್ ಪ್ರದೇಶದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
.Telangana Elections 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಕರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.