ಪುಣೆ: ಮಹಾರಾಷ್ಟ್ರದ ಪುಣೆ ನಗರದ ಹೊರವಲಯದಲ್ಲಿ 21 ವರ್ಷದ ಯುವತಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
.ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ.
ಪ್ರಾಥಮಿಕ ವರದಿಯ ಪ್ರಕಾರ, ಸಂತ್ರಸ್ತ ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ 11 ಗಂಟೆ ಸುಮಾರಿಗೆ ನಗರದ ಬೋಪ್ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಈ ವೇಳೆ ಮೂವರು ಅಪರಿಚಿತರು ಯುವಕ ನನ್ನು ಮರಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಥಳಿಸಿದ್ದಾರೆ. ಬಳಿಕ ಯುವತಿಯ ಮೇಲೂ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ‘ಆರೋಪಿಗಳ ಪತ್ತೆಗೆ 10ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಂಟಿ ಪೊಲೀಸ್ ಆಯುಕ್ತರಾದ ರಂಜನ್ ಕುಮಾರ್ ಶರ್ಮಾ ಅವರು ಮಾಹಿತಿ ನೀಡಿದರು.
.ಒಡಿಶಾ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಚಿನ್ನಾಭರಣ ದೋಚಿದ ಕಳ್ಳರು.
ಆರೋಪಿಗಳ ಪತ್ತೆಗಾಗಿ 10 ಪೊಲೀಸ್ ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಖೊಂಡ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
.ಬಾಲಕಿ ಮೇಲೆ ಅತ್ಯಾಚಾರ: ಕೇರಳದ ವ್ಯಕ್ತಿಗೆ 79 ವರ್ಷ ಜೈಲು ಶಿಕ್ಷೆ.
ಜನ ವಸತಿ ಇಲ್ಲದ ಪ್ರದೇಶದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾಗಿ ಖೊಂಡ್ವಾಲ ಪೊಲೀಸ್ ಠಾಣೆಯ ಸಿಬ್ಬಂದಿ ಹೇಳಿದ್ದಾರೆ.
.ಕಲಬುರಗಿ | ಬಾಲಕಿಯ ಮೇಲೆ ಅತ್ಯಾಚಾರ, ಬೆದರಿಕೆ: ಅಪರಾಧಿಗೆ 20 ವರ್ಷ ಜೈಲು.
ಘಟನೆ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆಯ ವಿಪಕ್ಷ ನಾಯಕ ವಿಜಯ್ ವಡೆಟ್ಟಿವರ್, ‘ರಾಜ್ಯದಲ್ಲಿ ಚುನಾವಣೆ ಇರುವುದರಿಂದ ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳು ತಮ್ಮನ್ನು ಭಾಯಿ, ಬಾಹು ಮತ್ತು ದಾದಾ ಎಂದು ಬಿಂಬಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ ಕಳೆದ 2 ದಿನಗಳಿಂದ ಪುಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಆಘಾತಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.