ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಕಲಿ ಚಿನ್ನಾಭರಣ ಅಡವಿಟ್ಟು ₹39 ಲಕ್ಷ ಸಾಲ: 22 ಜನರ ವಿರುದ್ಧ ಪ್ರಕರಣ ದಾಖಲು

Published : 6 ಅಕ್ಟೋಬರ್ 2024, 4:25 IST
Last Updated : 6 ಅಕ್ಟೋಬರ್ 2024, 4:25 IST
ಫಾಲೋ ಮಾಡಿ
Comments

ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಖಾಸಗಿ ಸಹಕಾರಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ₹39.25 ಲಕ್ಷ ಸಾಲ ಪಡೆದು ವಂಚಿಸಿದ ಆರೋಪದಡಿ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಆರೋಪಿಗಳು ನವೆಂಬರ್ 2020 ಮತ್ತು 2021ರ ನಡುವೆ ಮುಂಬ್ರಾ ಪ್ರದೇಶದ ಖಾಸಗಿ ಬ್ಯಾಂಕ್‌ ಶಾಖೆಯಲ್ಲಿ ನಕಲಿ ಆಭರಣಗಳನ್ನು ಅಡವಿಟ್ಟು ಸಾಲ ಪಡೆದಿದ್ದಾರೆ.

ಲೆಕ್ಕಪರಿಶೋಧನೆ ಮತ್ತು ತಪಾಸಣೆಯ ವೇಳೆ ಆಭರಣಗಳ ಅಸಲಿ ಸತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಬ್ಯಾಂಕ್‌ನ ಉದ್ಯೋಗಿಯೊಬ್ಬರು ನೀಡಿದ ದೂರು ಆಧರಿಸಿ, 22 ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT