ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಸರ್ಕಾರ 25 ಕೋಟಿ ಮಂದಿಯನ್ನು ಬಡತನ ರೇಖೆಗಿಂತ ಮೇಲೆತ್ತಿದೆ: ರಾಜನಾಥ ಸಿಂಗ್‌

Published : 19 ಮೇ 2024, 10:48 IST
Last Updated : 19 ಮೇ 2024, 10:48 IST
ಫಾಲೋ ಮಾಡಿ
Comments

ಸಂಭಲ್‌ಪುರ (ಒಡಿಶಾ): ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 25 ಕೋಟಿಯಷ್ಟು ಜನರನ್ನು ಬಡತನ ರೇಖೆಗಿಂತ ಮೇಲಕ್ಕೆತ್ತಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದ್ದಾರೆ.

ಸಂಭಲ್‌ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪರ ರೈರಾಖೋಲ್ ಎಂಬಲ್ಲಿ ನಡೆಸಿದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಜವಾಹರಲಾಲ್ ನೆಹರೂ ಅವರಿಂದ ಮೊದಲ್ಗೊಂಡು ಇಂದಿರಾ ಗಾಂಧಿ, ಮನಮೋಹನ್‌ ಸಿಂಗ್ ಅವರು ಸೇರಿ ದೇಶದಲ್ಲಿ ಬಡತನವನ್ನು ನಿರ್ಮೂಲನೆಗೊಳಿಸಲು ವಿಫಲರಾಗಿದ್ದಾರೆ. ಆದರೆ ದೇಶದಲ್ಲಿ ಬಡತನದ ಸಂಕಟವನ್ನು ಕಡಿಮೆ ಮಾಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ‍’ ಎಂದು ಅವರು ಹೇಳಿದ್ದಾರೆ.

‘ದೇಶದ ಜನರಿಗೆ ಕಳೆದ 10 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಕಾ ಮನೆ, ಮನೆಗಳಿಗೆ ಪೈಪ್ ನೀರು, ಉಚಿತ ಅಡುಗೆ ಅನಿಲ, ಉಚಿತ ಆಹಾರ, ಶೌಚಾಲಯ ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸಿದ್ದಾರೆ’ ಎಂದು ನುಡಿದಿದ್ದಾರೆ.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅದನ್ನು ಸಕಾರಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಈಗ ಬಾಲರಾಮ ದೇಗುಲಕ್ಕೆ ಬಂದಿದ್ದು, ರಾಮ ರಾಜ್ಯ ನಿರ್ಮಾಣ ಮಾಡಲಾಗುತ್ತಿದೆ’ ಎಂದರು ಹೇಳಿದ್ದಾರೆ.

‘ಒಡಿಶಾದ ಬಿಜೆಡಿ ಸರ್ಕಾರವು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಡಿಶಾದ ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಿದ್ದೇವೆ. ಬಡವರಿಗೆ ಕಲ್ಯಾಣ ಯೋಜನೆಗಳು ಲಭ್ಯವಾಗಬೇಕಾದರೆ ಕಮಲ ಚಿಹ್ನೆಗೆ ಮತ ಹಾಕಿ’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT