ಕೋಟಾ: ಎರಡು ಪ್ರತ್ಯೇಕ ಘಟನೆಗಳಲ್ಲಿ ಸೋಮವಾರ ಕೋಟಾದ ಕೋಚಿಂಗ್ ಸಂಸ್ಥೆಗಳ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಘಟನೆಗಳು ಹೆಚ್ಚುತ್ತಿರುವ ಕಾರಣ ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸುವ ಕಾನೂನು ಜಾರಿಗೊಳಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

ದೇಶದ ಬೃಹತ್ ಕೋಚಿಂಗ್ ತಾಣ ಎನಿಸಿರುವ ಕೋಟಾದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಲು ಇರುವ ಒತ್ತಡ ಮತ್ತೊಮ್ಮೆ ಬಹಿರಂಗವಾಗಿದೆ.

ಮೃತರಲ್ಲಿ ಇಬ್ಬರು ಬಿಹಾರದವರಾಗಿದ್ದು ಪ್ರತಿಷ್ಠಿತ ಕೋಚಿಂಗ್ ಕೇಂದ್ರದಲ್ಲಿ ಅಭ್ಯಾಸ ನಡೆಸುತ್ತಿದ್ದರು. ಪಿಜಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಮಧ್ಯಪ್ರದೇಶದವನು. ಮೃತರಲ್ಲಿ ಒಬ್ಬನಿಗೆ 19 ವರ್ಷ, ಮತ್ತೊಬ್ಬನಿಗೆ 18 ವರ್ಷ ಎಂದು ಕೋಟಾ ಎಸ್ಪಿ ಕೇಶರ್ ಸಿಂಗ್ ಹೇಳಿದ್ದಾರೆ.

‘ಇಬ್ಬರು ಕೂಡ ಪಿಯುಸಿ ಓದುತ್ತಿದ್ದರು. ಪ್ರತ್ಯೇಕ ಕೋಣೆಗಳಲ್ಲಿ ವಾಸವಾಗಿದ್ದರು. ಅವರ ಸ್ನೇಹಿತರ ಸಂಪರ್ಕಕ್ಕೆ ಯತ್ನಿಸುತ್ತಿದ್ದೇವೆ. ಪಿಜಿ ಮಾಲೀಕರು ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ’ಎಸ್ಪಿ ಅವರು ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ಬೆಳಿಗ್ಗೆ ಕೋಣೆಯಿಂದ ಹೊರಬಾರದಾಗ ಪಿಜಿ ಮಾಲೀಕರು ಅನುಮಾನಗೊಂಡಿದ್ದಾರೆ. ಬಳಿಕ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಠಾಣೆಗೆ ವಿಷಯ ತಿಳಿಸಿದ್ದಾರೆ.

ಕೋಟಾದಲ್ಲಿ ಕಳೆದ ಕೆಲ ವರ್ಷಗಳಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಕೋಚಿಂಗ್ ಸೆಂಟರ್ಗಳ ಒತ್ತಡವೇ ಕಾರಣವೆಂಬ ದೂರು ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಲು ಮುಂದಾಗಿರುವುದಾಗಿ ರಾಜಸ್ಥಾನ ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.