ಪಟ್ನಾ(ಬಿಹಾರ): ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್ನಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೋಟೆಲ್ನಲ್ಲಿ ಸಿಲುಕಿದ್ದ ಸುಮಾರು 20ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಗ್ನಿಶಾಮಕ ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ, ಬೆಳಿಗ್ಗೆ 11 ಗಂಟೆ ಸುಮಾರಿಗೆ ನಮಗೆ ಮಾಹಿತಿ ಸಿಕ್ಕಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸೂಕ್ತ ತನಿಖೆ ಬಳಿಕ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.
.ಮಧ್ಯಪ್ರದೇಶ: ಸರ್ಕಾರಿ ಕಟ್ಟಡದಲ್ಲಿ ಭಾರಿ ಬೆಂಕಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.