ನೋಯ್ಡಾ,ಉತ್ತರ ಪ್ರದೇಶ(ಪಿಟಿಐ): ಗ್ರೇಟರ್ ನೋಯ್ಡಾದ ಶಹಾ ಬೆರಿ ಗ್ರಾಮದಲ್ಲಿ ಬುಧವಾರ ಎರಡು ಬಹುಮಹಡಿ ಕಟ್ಟಡಗಳು ಕುಸಿದು ಕನಿಷ್ಠ ಮೂವರು ಮೃತಪಟ್ಟು, ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಸಮೀಪದ ಕಟ್ಟಡದ ಮೇಲೆ ಬಿದ್ದಿದೆ. ಪರಿಣಾಮ ಆ ಕಟ್ಟಡ ಕೂಡ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ಕುಸಿಯುವ ವೇಳೆ 12 ಮಂದಿ ಕಾರ್ಮಿಕರು ನಿರ್ಮಾಣ ಹಂತದ ಕಟ್ಟಡದಲ್ಲಿದ್ದರು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿ ಕಟ್ಟಡ ಮಾಲೀಕ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ. ಮತ್ತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್ಡಿಆರ್ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.