ಬರಹಮ್‌ಪುರ: ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರನ್ನು ವಾಮಾಚಾರದ ಆರೋಪ ಹೊರಿಸಿ ಗುಂಪು ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 33 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ 20 ಮಹಿಳೆಯರು ಸೇರಿದ್ದಾರೆ.

ಗುಂಪು ಹತ್ಯೆಗೆ ಸಂಬಂಧಿಸಿ ಆರೋಪಿಗಳ ಮೇಲೆ ಕೊಲೆ ಸೇರಿದಂತೆ ಐದು ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಹಲವರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕಬಿಸೂರ್ಯ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಭಾತ್ ಸಾಹೂ ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಕೃತ್ಯ ನಡೆದ ಮಧುರಚುವಾ ಗ್ರಾಮದ ಪುರುಷರೆಲ್ಲರೂ ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಮಾತ್ರ ಉಳಿದುಕೊಂಡಿದ್ದಾರೆ.

ಗ್ರಾಮದ ನಿವಾಸಿ ಯುಧಿಷ್ಠಿರ ನೆರೆಮನೆಯವರ ಮೇಲೆ ತಮ್ಮನ್ನು ಕೇಳದೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂಬ ಕಾರಣಕ್ಕೆ ಅವರ ಪತ್ನಿ ಝುನು ನಾಯಕ್ ಅವರನ್ನು ಗ್ರಾಮಸ್ಥರು ಬುಧವಾರ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.