ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿವೇಕಾನಂದ ರಾಕ್: ಗಮನ ಸೆಳೆದ ಮುರಳಿ ಮನೋಹರ ಜೋಶಿ ಜೊತೆಗಿನ ಮೋದಿ ಫೋಟೊ

Published 31 ಮೇ 2024, 7:16 IST
Last Updated 31 ಮೇ 2024, 7:16 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರ ಮುಗಿಸಿ ಕನ್ಯಾಕುಮಾರಿಯ ವಿವೇಕಾನಂದ ರಾಕ್‌ ಮೆಮೊರಿಯಲ್‌ ಧ್ಯಾನ ಮಂಟಪದಲ್ಲಿ ಧ್ಯಾನಕ್ಕೆ ಕುಳಿತಿದ್ದಾರೆ. 

ಈ ಮಧ್ಯೆ, 33 ವರ್ಷಗಳ ಹಿಂದೆ ಮೋದಿಯವರು ಬಿಜೆಪಿ ನಾಯಕ ಮುರಳಿ ಮನೋಹರ ಜೋಶಿ ಅವರೊಂದಿಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪ್ರದಕ್ಷಿಣೆ ಹಾಕಿದ್ದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ‌ ಹರಿದಾಡುತ್ತಿದೆ.

ಜೋಶಿ ಅವರೊಂದಿಗೆ ಮೋದಿ ಏಕತಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಕನ್ಯಾಕುಮಾರಿಯಲ್ಲಿ ತೆಗೆದ ಫೋಟೊ ಇದಾಗಿದೆ ಎಂದು ಹೇಳಲಾಗಿದೆ.

ಏಕತಾ ಯಾತ್ರೆ ಡಿಸೆಂಬರ್ 1991 ರಲ್ಲಿ ಕನ್ಯಾಕುಮಾರಿಯಲ್ಲಿ ಪ್ರಾರಂಭವಾಗಿ 1992 ಜನವರಿ 26,  ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವುದರೊಂದಿಗೆ ಕೊನೆಗೊಂಡಿತು. ಮುರಳಿ ಮನೋಹರ ಜೋಶಿ ಇದರ ನೇತೃತ್ವ ವಹಿಸಿದ್ದರು. ನರೇಂದ್ರ ಮೋದಿಯವರು ಆಯೋಜಿಸಿದ್ದರು.

ಇದೀಗ ಲೋಕಸಭಾ ಚುನಾವಣೆ ‍ಪ್ರಚಾರ ಮುಗಿಸಿ ವಿಶ್ರಾಂತಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವೇಕಾನಂದ ರಾಕ್ ಮೆಮೊರಿಯಲ್‌ನ ಧ್ಯಾನ ಮಂಟಪದಲ್ಲಿ ಧ್ಯಾನಾಸಕ್ತರಾಗಿದ್ದಾರೆ.

2019 ರ ಚುನಾವಣಾ ಪ್ರಚಾರದ ನಂತರ ಪ್ರಧಾನಿ ಮೋದಿ ಕೇದಾರನಾಥ ಗುಹೆಯಲ್ಲಿ ಇದೇ ರೀತಿಯ ಧ್ಯಾನವನ್ನು ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT