ಚಂಡೀಗಢ: ಪಂಜಾಬ್ನ ಗುರುದಾಸಪುರ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಪರಸ್ವರ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಬಟಾಲಾದ ವಿತ್ವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ಗುಂಪುಗಳಲ್ಲಿ ಒಟ್ಟು 13 ಜನರಿದ್ದರು. ಹಳೆ ವೈಷಮ್ಯ ಘಟನೆಗೆ ಕಾರಣ ಎನ್ನಲಾಗಿದೆ.

ಗುಂಡಿನ ದಾಳಿಯಲ್ಲಿ ಪ್ರತಿ ಗುಂಪಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಸಿನ್ಸಿನಾಟಿ ವಿವಿ ಆವರಣದ ಹತ್ತಿರ ಗುಂಡಿನ ದಾಳಿ: ಮೂವರು ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.