ರುದ್ರಪ್ರಯಾಗ: ಉತ್ತರಾಖಂಡದ ಫಾಟಾ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ನೇಪಾಳದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎಸ್ಡಿಆರ್ಎಫ್ ಹೊರತೆಗೆದಿದೆ. ಮೃತರನ್ನು ಪೂರ್ಣ ನೇಪಾಳಿ, ಕೃಷ್ಣ ಪರಿಹಾರ್ ಮತ್ತು ಚಿಕು ಬುರಾ ಹಾಗೂ ತುಲ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಇವರೆಲ್ಲರು ನೇಪಾಳದ ನಿವಾಸಿಗಳು ಎಂದು ರುದ್ರಪ್ರಯಾಗದ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜವರ ತಿಳಿಸಿದ್ದಾರೆ.

ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ. ತಡರಾತ್ರಿ 1.20ರ ಸುಮಾರಿಗೆ ಫಾಟಾ ಗ್ರಾಮದ ಖಾಟ್ ಗಡೇರಾ ಬಳಿ ಭೂ ಕುಸಿತ ಸಂಭವಿಸಿದೆ. ಈ ಬಗ್ಗೆ ಮಾಹಿತಿ ಪಡೆದ ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಧಾವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ತ್ರಿಪುರಾ | ಭೂಕುಸಿತ: ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.