ಭುವನೇಶ್ವರ: ಡಿಸೆಂಬರ್ 4ರಂದು ನೌಕಪಡೆ ದಿನ ಅಂಗವಾಗಿ ಒಡಿಶಾದ ಪುರಿಯ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ನೌಕಾಬಲದ ಶಕ್ತಿ ಪ್ರದರ್ಶನಗೊಳ್ಳಲಿದೆ.

ನೌಕಾಪಡೆಯ ಕಾರ್ಯಾಚರಣೆ ಪ್ರಾತ್ಯಕ್ಷಿಕೆಯಲ್ಲಿ ಮಿಗ್-29 ಯುದ್ಧ ವಿಮಾನ, ಎಲ್ಸಿಎ ಸೇರಿದಂತೆ 40 ವಿಮಾನಗಳು ಮತ್ತು 25 ಯುದ್ಧನೌಕೆಗಳು ಶಕ್ತಿ ಪ್ರದರ್ಶನ ನಡೆಸಲಿವೆ.

ಇದೇ ಮೊದಲ ಬಾರಿ ಒಡಿಶಾದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಆಕರ್ಷಕ ಪರೇಡ್ಗಳು ಒಳಗೊಂಡಿರಲಿವೆ.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಜ್ಯಪಾಲ ರಘುಬರ್ ದಾಸ್, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ನೌಕಾಪಡೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಾಚರಣೆಯನ್ನು ವೀಕ್ಷಿಸಲು ಸಾರ್ವಜನಿಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅತ್ಯಾಧುನಿಕ ಯುದ್ಧನೌಕೆಗಳು ಮತ್ತು ಯುದ್ಧ ವಿಮಾನಗಳನ್ನು ವೀಕ್ಷಿಸುವ ಅವಕಾಶವಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ನೌಕಾಪಡೆ ಇಬ್ಬರು ಮಹಿಳಾ ಅಧಿಕಾರಿಗಳಿಂದ ವಿಶ್ವಪರ್ಯಟನೆ.ಭಾರತದ ಇಬ್ಬರು ಮೀನುಗಾರರು ನಾಪತ್ತೆ: ಶ್ರೀಲಂಕಾ ನೌಕಾಪಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.