ಸುರೇಂದ್ರನಗರ (ಗುಜರಾತ್): ಲಖ್ತರ್ ತಾಲ್ಲೂಕಿನ ವಾನಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ(ಅ.15) ರಾತ್ರಿ ದಿಯೋದರ್‌ನಿಂದ ಜುನಾಗಢಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಜಗದೀಶ್ ಮಕ್ವಾನಾ, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ತಡರಾತ್ರಿ 12.15ರ ಸುಮಾರಿಗೆ ದಿಯೋದರ್‌ನಿಂದ ಜುನಾಗಢಕ್ಕೆ ಹೋಗುತ್ತಿದ್ದ ಬಸ್ ವಾನಾ ಗ್ರಾಮದ ಬಳಿ ಪಲ್ಟಿಯಾಗಿದೆ. ಬಸ್‌ನಲ್ಲಿ ಸುಮಾರು 55 ರಿಂದ 60 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ 40 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.
.ರಾಜಸ್ಥಾನದಲ್ಲಿ ಬಸ್–ಟ್ರಕ್ ಅಪಘಾತ: ನಾಲ್ಕು ಪ್ರಯಾಣಿಕರು ಸಾವು, 20 ಜನರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.