ಚಾಯ್‌ಬಾಸ (ಜಾರ್ಖಂಡ್): ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಪೂರ್ವ ಸಿಂಗ್‌ಭುಂ ಜಿಲ್ಲೆಯ ಕಾಡಿನೊಂದರಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 5 ಕಚ್ಚಾ ಬಾಂಬ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಕ್ಸಲ್ ನಿಗ್ರಹ ಪಡೆಯಲ್ಲಿರುವ ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕವನ್ನು ಹುದುಗಿಸಿಡಲಾಗಿತ್ತು.

ತುಂಬಕ ಗ್ರಾಮದ ಸಮೀಪ ಇರುವ ಕಾಡಿನಲ್ಲಿ ಕಾರ್ಯಾಚರಣೆ ವೇಳೆ ಸಿಬ್ಬಂದಿಗಳು ಬಾಂಬ್ ಅನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಹೇಳಿದ್ದಾರೆ.

ಸ್ಥಳದಲ್ಲಿದ್ದ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಜಿಲ್ಲೆಯ ಕೊಲ್ಹನ್ ಪ್ರದೇಶದಲ್ಲಿ ಮಾವೋವಾದಿಗಳು ಅಡಿಗಿದ್ದಾರೆ ಎನ್ನುವ ಮಾಹಿತಿ ಆಧರಿಸಿ ಜನವರಿ 11 ರಿಂದ ವ್ಯಾಪಕ ಕೂಂಬಿಂಗ್ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.