ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟದಲ್ಲಿ 7 ರಿಂದ 11 ವರ್ಷ ವಯಸ್ಸಿನ ಐದು ಮಕ್ಕಳು ಗಾಯಗೊಂಡಿದ್ದಾರೆ.

ಜಂಗಿಪುರ್‌ನ ಮಥ್‌ಪರಾದಲ್ಲಿರುವ ಮಾವಿನ ತೋಪಿನಲ್ಲಿ ಬೆಳಗ್ಗೆ 11ರ ಸುಮಾರಿಗೆ ಈ ಘಟನೆ ವರದಿಯಾಗಿದೆ. ದುಂಡಗಿನ ಆಕಾರದಲ್ಲಿದ್ದ ಕಚ್ಚಾ ಬಾಂಬ್‌ಗಳನ್ನು ಚೆಂಡುಗಳೆಂದು ತಪ್ಪಾಗಿ ಭಾವಿಸಿದ್ದ ಮಕ್ಕಳು ಫುಟ್‌ಬಾಲ್ ರೀತಿ ಆಡಲಾರಂಭಿಸಿದ್ದರು. ಈ ವೇಳೆ ಒಂದು ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳು ಮಕ್ಕಳನ್ನು ಆರ್ಯನ್ ಶೇಖ್ (8), ದಾವುದ್ ಶೇಖ್ (10), ಅಸಾದುಲ್ ಶೇಖ್ (7), ಸುವಾನ್ ಶೇಖ್ (11), ಮತ್ತು ಇಮ್ರಾನ್ ಶೇಖ್ (9) ಎಂದು ಗುರುತಿಸಲಾಗಿದೆ. ಎಲ್ಲರನ್ನೂ ಜಂಗಿಪುರ್ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಇನ್ನಷ್ಟೇ ಬಂಧಿಸಬೇಕಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.