ಮುಂಬೈ: ಭೀಮಾ–ಕೋರೆಗಾಂವ್ ಗ್ರಾಮದಲ್ಲಿನ ಹಿಂಸಾಚಾರ ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಬುಧವಾರ ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿವೆ. ಹಲವು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಂಬೈ, ಪುಣೆ ಸೇರಿ ಹಲವು ನಗರಗಳಲ್ಲಿ ಪ್ರತಿಭಟನಾಕಾರರು ಬಸ್ ಹಾಗೂ ಇತರ ವಾಹನಗಳಿಗೆ ಕಲ್ಲು ತೂರಿದ್ದಾರೆ. ಠಾಣೆಯಲ್ಲಿ ನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮೆಟ್ರೊ, ರೈಲು ಹಾಗೂ ಪೂರ್ವ ಎಕ್ಸ್‌ಪ್ರೆಸ್ ಹೆದ್ದಾರಿ ತಡೆ ನಡೆಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಸಿ ಲೋಕಲ್ ರೈಲು ಸಂಚಾರ ರದ್ದು ಪಡಿಸಲಾಗಿದೆ. ಕೆಲ ಭಾಗಗಳಲ್ಲಿ ಪ್ರತಿಭಟನಾಕಾರರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.