ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಹಳ್ಳಿಯಲ್ಲಿ ಗೋದಾವರಿ ನದಿಯಲ್ಲಿ ಆರು ಮಂದಿ ಮುಳುಗಿ ನೀರು ಪಾಲಾಗಿದ್ದಾರೆ.

ಕುಟುಂಬ ಸಂಬಂಧಿತ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಪೋಚಂಪಾಡು ಬಳಿ ಸುಮಾರು 25 ಮಂದಿಯ ಗುಂಪು ಸೇರಿತ್ತು. ಇವರೆಲ್ಲರೂ ಸಂಬಂಧಿಕರು. ಇವರಲ್ಲಿ ಏಳು ಮಂದಿ ಸ್ನಾನಕ್ಕಾಗಿ ನದಿಗೆ ಇಳಿದಿದ್ದರು. ಆಳ ನೀರಿನ ಕಡೆಗೆ ಹೋದಾಗ ನೀರಿನಲ್ಲಿ ಮುಳುಗಿದ್ದಾರೆ. ಇವರಲ್ಲಿ ಯಾರಿಗೂ ಈಜು ಗೊತ್ತಿರಲಿಲ್ಲ. ಇದರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ. ಉಳಿದವರು ಜಲಸಮಾಧಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.