ಆನಂದ್ (ಗುಜರಾತ್): ಅಹಮದಾಬಾದ್ ಹಾಗೂ ವಡೋದರ ಎಕ್ಸ್ಪ್ರೆಸ್ವೇನಲ್ಲಿ ಸೋಮವಾರ ಬೆಳಿಗ್ಗೆ ವೇಗವಾಗಿ ಬಂದ ಟ್ರಕ್, ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್ ಜಿಲ್ಲೆಯ ಛಿಖೋದ್ರ ಗ್ರಾಮದ ಬಳಿ ನಸುಕಿನ 4.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಸ್ಫೋಟಗೊಂಡಿದ್ದ ಚಕ್ರವನ್ನು ಬದಲಿಸಲು ಬಸ್ ಅನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆಗ ಹಲವರು ಬಸ್ನಿಂದ ಇಳಿದಿದ್ದರು. ಕೆಲವರು ಬಸ್ನ ಎದುರು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್, ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಆನಂದ್ ಗ್ರಾಮಾಂತರ ಠಾಣೆ ಪೊಲೀಸರು ಹೇಳಿದ್ದಾರೆ.

ಬಸ್ನ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.