ದೇವಾರಿಯಾ (ಉತ್ತರಪ್ರದೇಶ): ಆಸ್ತಿ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಜನ ಮೃತಪಟ್ಟ ಘಟನೆ ಫತೇಪುರ್ ಗ್ರಾಮದ ರುದ್ರಪುರ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಜಿಲ್ಲಾ ಪಂಚಾಯ್ತಿಯ ಮಾಜಿ ಸದಸ್ಯ ಪ್ರೇಮ್ ಯಾದವ್ ಎಂಬುವವರನ್ನು ಸತ್ಯಪ್ರಕಾಶ ದೂಬೆ ಹಾಗೂ ಕುಟುಂಬದವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅಭಯಪುರದ ಯಾದವ್ ಬೆಂಬಲಿಗರು ದುಬೆ ಮೇಲೆ ದಾಳಿ ನಡೆಸಿ ಒಂದೇ ಕುಟುಂಬದ ಐವರನ್ನು ಹತ್ಯೆಗೈದಿದ್ದಾರೆ ಎಂದು ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಎರಡೂ ಕುಟುಂಬಗಳ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಗೆ ಸಂಬಂಧಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತ ಹಾಗೂ ಐಜಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.