ಪ್ರತಾಪಗಢ (ಉತ್ತರ ಪ್ರದೇಶ): ಇಲ್ಲಿನ ಪ್ರಯಾಗ್‌ರಾಜ್-ಲಖನೌ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8.30ರ ಸುಮಾರಿಗೆ ಹತಿಗವಾನ್ ಪ್ರದೇಶದ ಬಿಶಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಪ್ರಯಾಗರಾಜ್‌ನಿಂದ ಮಂಗರ್ ಆಶ್ರಮಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು 6 ವರ್ಷದ ಗುಂಗುನ್ ಗೋಸ್ವಾಮಿ, ಅನುಜ್ ಗೋಸ್ವಾಮಿ (32), ವೈಷ್ಣವಿ ಗೋಸ್ವಾಮಿ (25) ಎಂದು ಗುರುತಿಸಲಾಗಿದೆ. ಉಳಿದಂತೆ ಗಾಯಗೊಂಡರ ಪೈಕಿ ಅನಿತಾ (40) ಮತ್ತು ಟ್ವಿಂಕಲ್ (25) ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.