ನವದೆಹಲಿ: ‘2015 ರಿಂದ ಐದು ವರ್ಷಗಳ ಅವಧಿಯಲ್ಲಿ 6.76 ಲಕ್ಷ ಮಂದಿ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಹಾಗೂ 1.24 ಕೋಟಿ ಭಾರತೀಯರು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ’ ಎಂದು ಗೃಹ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಕಾಂಗ್ರೆಸ್ ಸಂಸದ ಕಾರ್ತಿ ಪಿ. ಚಿದಂಬರಂ ಅವರ ಪ್ರಶ್ನೆಗೆ, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ಬಹಿರಂಗವಾಗಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, 2015 ಮತ್ತು 2019 ರ ನಡುವೆ 6,76,074 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ.

ವಿದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸಂಖ್ಯೆ ಎಷ್ಟಿದೆ ಎಂಬ ಪ್ರಶ್ನೆಗೆ, ವಿದೇಶಾಂಗ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ 1,24,99,395 ಭಾರತೀಯ ಪ್ರಜೆಗಳು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಉಭಯ ರಾಷ್ಟ್ರಗಳ ಪೌರತ್ವ ನೀಡುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಸಚಿವ ರಾಯ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.