ಬಾಲೇಶ್ವರ: ಬೀದಿ ನಾಯಿ ದಾಳಿಯಿಂದಾಗಿ 80 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಮಹಿಳೆಯನ್ನು ಬಸಂತಿ ಸಾಹು ಎಂದು ಗುರುತಿಸಲಾಗಿದೆ. ಜಯರಾಂಪುರ ಬೊಗ್ರಾಯಿ ಬ್ಲಾಕ್ನಲ್ಲಿರುವ ಮನೆಯಲ್ಲಿ ಮಲಗಿದ್ದ ಅವರ ಮೇಲೆ ನಾಯಿ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಯಿ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ನಡೆದಾಗ ಮಹಿಳೆ ಮನೆಯಲ್ಲಿ ಒಬ್ಬರೆ ಇದ್ದರು. ಕುಟುಂಬಸ್ಥರು ಊರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಿದ್ದರು.

ಮಹಿಳೆ ಚೀರಾಟವನ್ನು ಕೇಳಿ ಘಟನಾ ಸ್ಥಳಕ್ಕೆ ಬಂದ ನೆರೆಹೊರೆಯವರು, ನಾಯಿಯನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.