ನವದೆಹಲಿ: ರಷ್ಯಾ ಸೇನೆಯು ಈವರೆಗೆ ಭಾರತ ಮೂಲದ 85 ಸೈನಿಕರನ್ನು ಬಿಡುಗಡೆ ಮಾಡಿದೆ. ಉಳಿದ 20 ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮುಂದುವರಿದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದರು.

‘ಬ್ರಿಕ್ಸ್ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಉಳಿದ ಸೈನಿಕರ ವಾಪಸಾತಿ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

‘ಈ ವಿಚಾರವಾಗಿ ಭಾರತವು ರಷ್ಯಾದ ರಕ್ಷಣಾ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ’ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಜುಲೈನಲ್ಲಿ ಪುಟಿನ್ ಅವರೊಂದಿಗೆ ನಡೆಸಿದ ಮಾತುಕತೆ ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರು ಭಾರತೀಯ ಬಿಡುಗಡೆಗೆ ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.