ಭೋಪಾಲ್: ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ (ಶೇ 39) ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ಎಡಿಆರ್) ವರದಿ ಪ್ರಕಾರ, 2018ರಲ್ಲಿ 94 ಶಾಸಕರು (ಶೇ 41) ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರು. ಈ ಪ್ರಮಾಣದಲ್ಲೀಗ ಕೊಂಚ ಇಳಿಕೆಯಾಗಿದೆ.
.ಮ.ಪ್ರದೇಶ: ವಿಧಾನಸಭೆಗೆ ಆಯ್ಕೆಯಾದ 230 ಮಂದಿ ಪೈಕಿ 205 ಶಾಸಕರು ಕೋಟ್ಯಧಿಪತಿಗಳು.Madhya Pradesh Election Results: ಮಧ್ಯಪ್ರದೇಶದಲ್ಲಿ ಬಿಜೆಪಿ ‘ಚಮತ್ಕಾರ’ .
ಈ ಪೈಕಿ 34 ಶಾಸಕರು ಐದು ವರ್ಷ ಅಥವಾ ಅದಕ್ಕಿಂತಲೂ ಹೆಚ್ಚು ಶಿಕ್ಷೆಯಾಗಬಹುದಾದ ಮತ್ತು ಜಾಮೀನುರಹಿತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಶಿವಪುರಿ ಜಿಲ್ಲೆಯ ಪಿಚೋರ್ನಿಂದ ಆಯ್ಕೆಯಾಗಿರುವ ಬಿಜೆಪಿಯ ಪ್ರೀತಮ್ ಲೋಧಿ, ಕೊಲೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಏಕೈಕ ಶಾಸಕ. ಹೊಸದಾಗಿ ಆಯ್ಕೆಯಾಗಿರುವ ಇನ್ನಿತರ ಐದು ಶಾಸಕರು ಕೊಲೆ ಯತ್ನದ ಆರೋಪ ಎದುರಿಸುತ್ತಿದ್ದಾರೆ.

ಮೂವರು ಶಾಸಕರು ಮಹಿಳೆಯರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

230 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ163 ಸ್ಥಾನಗಳಲ್ಲಿ ಜಯ ಗಳಿಸಿದ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಜಯ ಗಳಿಸಿದೆ.

ಬಿಜೆಪಿಯ 51 ಮಂದಿ ಶಾಸಕರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಈ ಪೈಕಿ 16 ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ನ 38 ಶಾಸಕರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, 17 ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ವಿಧಾನಸಭೆಗೆ ಆಯ್ಕೆಯಾಗಿರುವ ಭಾರತ್ ಆದಿವಾಸಿ ಪಕ್ಷದ ಏಕೈಕ ಶಾಸಕ ಕಮಲೇಶ್ ದೊಡಿಯಾರ್ ಸಹ ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.