ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ, ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
.ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್.
ಕೇಜ್ರಿವಾಲ್ ಪರ ವಕೀಲರು ಕೋರ್ಟ್ಗೆ ಇಬ್ಬರ ಜಾಮೀನು ಹಾಗೂ ₹10 ಲಕ್ಷ ಭದ್ರತಾ ಬಾಂಡ್ಗಿ ನೀಡಿದ ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ರಾಕೇಶ್ ಸ್ಯಾಲ್ ಅವರು ಬಿಡುಗಡೆ ಆದೇಶ ಮಾಡಿದರು.

ಇದೇ ವೇಳೆ ಕೇಜ್ರಿವಾಲ್ ಅವರನ್ನು ಶೀಘ್ರವೇ ಬಿಡುಗಡೆಗೊಳಿಸಬೇಕು ಎಂದು ಅವರ ವಕೀಲರು ವಿಶೇಷ ದೂತರ ಮೂಲಕ ಕಳುಹಿಸಿದ್ದ ಬಿಡುಗಡೆ ವಾರೆಂಟ್ ಅನ್ನೂ ಕೋರ್ಟ್ ಮಾನ್ಯ ಮಾಡಿತು.
.ಜಾಮೀನು ಪಡೆದರೂ ಅಧಿಕಾರ ಚಲಾಯಿಸಲಾಗದ ಕೇಜ್ರಿವಾಲ್ ರಾಜೀನಾಮೆ ಕೊಡಲಿ: ಬಿಜೆಪಿ.
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
.ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದಿಂದ ಶಿಕ್ಷಣ ಕ್ರಾಂತಿ: ಆತಿಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.