ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್‌: ಆಸ್ಪತ್ರೆಗೆ ಬೆಂಕಿ– 9 ರೋಗಿಗಳ ಸಾವು

Published 18 ಜೂನ್ 2024, 14:54 IST
Last Updated 18 ಜೂನ್ 2024, 14:54 IST
ಅಕ್ಷರ ಗಾತ್ರ

ಟೆಹರಾನ್: ಉತ್ತರ ಇರಾನ್‌ನ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಂಬತ್ತು ರೋಗಿಗಳು ಮೃತಪಟ್ಟಿದ್ದಾರೆ.

ಇರಾನ್‌ ರಾಜಧಾನಿಯಿಂದ ವಾಯವ್ಯ ದಿಕ್ಕಿಗೆ ಸುಮಾರು 330 ಕಿ.ಮೀ. ದೂರದಲ್ಲಿರುವ ರಶತ್‌ ನಗರದ ಖಾಯಿಮ್‌ ಆಸ್ಪತ್ರೆಯಲ್ಲಿ ಸ್ಥಳೀಯ ಕಾಲಮಾನ ಮಧ್ಯರಾತ್ರಿ 1.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಮೃತಪಟ್ಟವರಲ್ಲಿ ಆರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ವರದಿ ಮಾಡಿದೆ.

ಆಸ್ಪತ್ರೆಯ ನೆಲಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ನಗರದ ಅಗ್ನಿಶಾಮಕ ದಳದ ಮುಖ್ಯಸ್ಥ ಶಹ್ರಾಮ್ ಮೊಮೇನಿ ಹೇಳಿದ್ದಾರೆ. 

‘ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ 140 ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ 120 ಮಂದಿಯನ್ನು ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ತಿಳಿಸಿದರು.

ಬೆಂಕಿ ಹಾಗೂ ದಟ್ಟ ಹೊಗೆ ಆಸ್ಪತ್ರೆಯನ್ನು ಆವರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. 2020 ರಲ್ಲಿ ಉತ್ತರ ಟೆಹರಾನ್‌ನ ಆಸ್ಪತ್ರೆಯೊಂದರಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಿಂದ 19 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT