ಪಲಮನೇರ್( ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವೇಗವಾಗಿ ಬಂದ ಲಾರಿಯೊಂದು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ ಎಂದು ಅರಣ್ಯಾಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿಯ ಜಗಮರ್ಲಾ ಕ್ರಾಸ್ನಲ್ಲಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ಹೆದ್ದಾರಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಲಾರಿ ಚಾಲಕ ಕುಡಿದ ಅಮಲಿನಲ್ಲಿ ಡಿಕ್ಕಿ ಹೊಡೆದಿದ್ದಾನೆ. ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅರಣ್ಯಾಧಿಕಾರಿ ಚೈತನ್ಯ ಕುಮಾರ್ ರೆಡ್ಡಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮೃತ ಆನೆಗಳಲ್ಲಿ ಒಂದು ಹೆಣ್ಣು ಹಾಗೂ ಎರಡು ಗಂಡು ಆನೆಗಳು ಸೇರಿವೆ.

ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ರೆಡ್ಡಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.