ಪಟ್ನಾ: ಪುರುಷರ ಗುಂಪೊಂದು ಬುಡಕಟ್ಟು ಮಹಿಳೆಯ ತಲೆ ಕೂದಲನ್ನು ಬೋಳಿಸಿರುವ ಅಮಾನವೀಯ ಘಟನೆ ಬಿಹಾರ್ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ರಾಣಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬುಡಕಟ್ಟು ಗ್ರಾಮವೊಂದರಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಮಹಿಳೆಯು ಗ್ರಾಮದಲ್ಲಿರುವ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಪುರುಷರ ಗುಂಪೊಂದು ಆಕೆಯ ತಲೆಯ ಕೂದಲನ್ನು ಬೋಳಿಸಿದ್ದಾರೆ. ಈ ವೇಳೆ ಅನೇಕರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂತ್ರಸ್ತೆಯ ತಲೆ ಬೋಳಿಸುವಾಗ ಆಕೆಯನ್ನು ಬುಡಕಟ್ಟು ಭಾಷೆಯಲ್ಲಿ ( ಸಂತಾಲಿ) ಕೆಟ್ಟ ಪದಗಳಲ್ಲಿ ನಿಂದಿಸುತ್ತಿರುವುದು ವಿಡಿಯೊದಲ್ಲಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ಕೆಲವು ಗ್ರಾಮಸ್ಥರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರ ತಂಡವು ಗ್ರಾಮಕ್ಕೆ ಧಾವಿಸಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ.

ಸಂತ್ರಸ್ತೆ ಹಾಗೂ ಆಕೆಯೊಂದಿಗೆ ಇದ್ದ ಪುರುಷನನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದೇವೆ. ಘಟನೆಯ ನಂತರ ಅವರು (ಸಂತ್ರಸ್ತರು) ಭಯಭೀತರಾಗಿದ್ದ ಕಾರಣ ಆರೋಪಿಗಳ ವಿರುದ್ಧ ಲಿಖಿತ ದೂರು ನೀಡಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.