ನವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಬೀದಿಗಿಳಿಯಲು ನಿರ್ಧರಿಸಿದ್ದು, ಇಂದಿನಿಂದ ಒಂದು ವಾರಗಳ ಕಾಲ ಪ್ರತಿಭಟನೆ ಹಮ್ಮಿಕೊಂಡಿದೆ.

ವಿವಾದಾತ್ಮಕ ಆದೇಶದ ಪ್ರತಿಗಳು ಮತ್ತು ಸಾಂಕೇತಿಕ ಪ್ರತಿಕೃತಿಗಳನ್ನು ಪಕ್ಷದ ಕಾರ್ಯಕರ್ತರು ಸುಟ್ಟು ಹಾಕಿ ಪ್ರತಿಭಟಿಸಲಿದ್ದಾರೆ. ರಾಷ್ಟ್ರ ರಾಜಧಾನಿಯ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಸ್ಪಷ್ಟ ಸಂದೇಶವನ್ನು ರವಾನಿಸಲಾಗುತ್ತದೆ ಎಂದು ಎಎಪಿ ಪ್ರಕಟಣೆ ತಿಳಿಸಿದೆ.

ಗಮನಾರ್ಹವೆಂದರೆ, ಈ ಮೊದಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು. ಆದರೆ, ಈಗ ದಿಢೀರನೇ ಪ್ರತಿಭಟನೆ ಆರಂಭಿಸಿರುವುದಕ್ಕೆ ಪಕ್ಷ ಕಾರಣ ನೀಡಿಲ್ಲ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಯನ್ನು ಹೊರತುಪಡಿಸಿ ದೆಹಲಿಯಲ್ಲಿ ಸೇವೆಗಳ ನಿಯಂತ್ರಣವನ್ನು ಸುಪ್ರೀಂ ಕೋರ್ಟ್ ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸಿದ ಒಂದು ವಾರದ ನಂತರ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದು ಗ್ರೂಪ್ ಎ ಅಧಿಕಾರಿಗಳ ವರ್ಗಾವಣೆ ಮತ್ತು ಶಿಸ್ತಿನ ಪ್ರಕ್ರಿಯೆಗಳಿಗಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸಿತ್ತು.

ಸುಪ್ರೀಂ ಕೋರ್ಟ್ನ ತೀರ್ಪಿನ ಮೊದಲು ದೆಹಲಿ ಸರ್ಕಾರದ ಎಲ್ಲಾ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಅಧಿಕಾರವು ಲೆಫ್ಟಿನೆಂಟ್ ಗರ್ವನರ್ ಅವರ ಕಾರ್ಯನಿರ್ವಾಹಕ ನಿಯಂತ್ರಣದಲ್ಲಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.