ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಎಎಪಿ ನಿರ್ಧರಿಸಿದೆ. ಆದರೆ ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಶನಿವಾರ ಬೆಳಿಗ್ಗೆ 11.30ಕ್ಕೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಎಎಪಿ ನಿರ್ಧರಿಸಿದೆ.
.ಎಷ್ಟೇ ಕಿರುಕುಳ ನೀಡಿದರೂ ಕೇಜ್ರಿವಾಲ್ ತಲೆ ಬಾಗಲ್ಲ: ಭಗವಂತ್ ಮಾನ್.
‘ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿಲ್ಲ. ಪ್ರತಿಭಟನಾಕಾರರನ್ನು ತಡೆಯಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಅರೆಸೇನಾ ಪಡೆಯ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಕಚೇರಿ ಇರುವ ದೀನ್ ದಯಾಳ್ ಉಪಾಧ್ಯಾಯ ರಸ್ತೆಯಲ್ಲಿ ಈಗಾಗಲೇ ಸಿಆರ್ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿ ಇದ್ದು, ಅಗತ್ಯ ಬಿದ್ದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗುವುದು ಎಂದೂ ಅವರು ಹೇಳಿದ್ದಾರೆ.
.CBI ದುರ್ಬಳಕೆ ಮಾಡಿಕೊಂಡ BJP; ನಕಲಿ ಪ್ರಕರಣದಲ್ಲಿ ಕೇಜ್ರಿವಾಲ್ ಬಂಧನ: ಎಎಪಿ ಟೀಕೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಹಾಗೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.
.ಕೇಜ್ರಿವಾಲ್ ಜಾಮೀನಿಗೆ ತಡೆ, ಹೈಕೋರ್ಟ್ನಿಂದ ರೂಢಿಗತವಲ್ಲದ ಆದೇಶ: ಸುಪ್ರಿಂಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.