ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ₹1 ಕೋಟಿ ಪರಿಹಾರಕ್ಕೆ ಎಎಪಿ ಆಗ್ರಹ

Published 28 ಜೂನ್ 2024, 11:18 IST
Last Updated 28 ಜೂನ್ 2024, 11:18 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕೆಂದು ಆಮ್‌ ಆದ್ಮಿ ಪಕ್ಷ (ಎಎಪಿ) ಆಗ್ರಹಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ನಾಯಕ ಜಾಸ್ಮಿನ್‌ ಶಾ, ‘ವಿಮಾನ ನಿಲ್ದಾಣದಲ್ಲಿನ ದುರಂತಕ್ಕೆ ಕಾರಣ ಏನೆಂಬುದನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದೆ ಬಂದು ವಿವರಿಸಬೇಕು’ ಎಂದು ಹೇಳಿದ್ದಾರೆ.

‘ಇಂದು ಅತ್ಯಂತ ದುಃಖಕರ ಘಟನೆ ನಡೆದಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಇತರೆ ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಡಿಯಲ್ಲಿ ಬರುತ್ತವೆ’ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಅವರು ಆಗ್ರಹಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹1 ಕೋಟಿ ಮತ್ತು ಗಾಯಗೊಂಡವರಿಗೆ ₹50 ಲಕ್ಷ ಪರಿಹಾರ ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶಾ ಹೇಳಿದ್ದಾರೆ.

ಇಂದು (ಶುಕ್ರವಾರ) ಮುಂಜಾನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಪರಿಣಾಮ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT