ನವದೆಹಲಿ: ದೆಹಲಿಯ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವು 'ರಾಮ ರಾಜ್ಯ'ದಿಂದ ಪ್ರೇರಣೆ ಪಡೆದಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯ ಜನರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ರಾಮ ರಾಜ್ಯ ಕಲ್ಪನೆಯಿಂದ ದೆಹಲಿಯ ಎಎಪಿ ಸರ್ಕಾರವು ಪ್ರೇರಣೆ ಪಡೆದಿದೆ ಎಂದು ಅವರು ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ದೆಹಲಿಯ ಎಎಪಿ ಸರ್ಕಾರ ಆಯೋಜಿಸಿರುವ ಮೂರು ದಿನಗಳ ಕಾಲ ರಾಮಲೀಲಾ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಈ ಕುರಿತು ಮಾತನಾಡಿದ್ದಾರೆ.

ನಾಳೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಅನೇಕ ಮಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಭಿಲಾಷೆ ಇದ್ದರೂ ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ದೆಹಲಿ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿರುವುದರಲ್ಲಿ ನನಗೆ ಸಂತಸವಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.