ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಮುಖ್ಯಮಂತ್ರಿಯಾಗಿ ಆತಿಶಿ ಮರ್ಲೇನಾ ಪ್ರಮಾಣ

Published : 21 ಸೆಪ್ಟೆಂಬರ್ 2024, 11:18 IST
Last Updated : 21 ಸೆಪ್ಟೆಂಬರ್ 2024, 11:18 IST
ಫಾಲೋ ಮಾಡಿ
Comments

ನವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಪ್ರಮಾಣವಚನ ಬೋಧಿಸಿದರು.

ಇದೇ ವೇಳೆ ಸೌರಭ್‌ ಭಾರದ್ವಾಜ್‌, ಗೋಪಾಲ್‌ ರಾಯ್‌, ಇಮ್ರಾನ್‌ ಹುಸ್ಸೇನ್‌, ಕೈಲಾಶ್‌ ಗೆಹ್ಲೋತ್‌ ಮತ್ತು ಮುಖೇಶ್‌ ಅಹ್ಲಾವತ್‌ ಅವರೂ ಸಚಿವರಾಗಿ ಪ್ರಮಾಣ ಮಾಡಿದರು.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ಕೇಂದ್ರೀಯ ತನಿಖಾ ದಳವು (ಸಿಬಿಐ) ಬಂಧಿಸಿತ್ತು.

ಸದ್ಯ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಬಿಡುಗಡೆಯಾಗಿರುವ ಅವರು, ಕಳೆದವಾರವಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ, ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಘೋಷಿಸಿದ್ದರು. ಈ ನಿರ್ಧಾರವನ್ನು ಪಕ್ಷವು ಸರ್ವಾನುಮತದಿಂದ ಅಂಗೀಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT