ನವದೆಹಲಿ: ದೇಶದಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ನಿಷೇಧಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಒತ್ತಾಯಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಏಕೆಂದರೆ ಈ ಸಮೀಕ್ಷೆಗಳು ಒಂದಲ್ಲ, ಹಲವು ಬಾರಿ ತಪ್ಪು ಎಂದು ಸಾಬೀತಾಗಿವೆ. ಇದು ದೇಶದ ಜನರು, ಆಡಳಿತ ವ್ಯವಸ್ಥೆ ಮತ್ತು ಚುನಾವಣೆಯ ಮೇಲೆ ಪ್ರಭಾವ ಬೀರುವ ತಪ್ಪು ಪ್ರಯತ್ನವಾಗಿದೆ' ಎಂದು ಅವರು ಹೇಳಿದ್ದಾರೆ.

ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, 'ಇಂಡಿಯಾ' ಕೂಟ 295 ಸ್ಥಾನಗಳನ್ನು ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಎನ್‌ಡಿಎಗೆ 350ಕ್ಕೂ ಹೆಚ್ಚು ಸ್ಥಾನಗಳು ದೊರೆಯಲಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.
.Exit Poll 2024 | ಮೋದಿ ‘ಹ್ಯಾಟ್ರಿಕ್’: ಮತಗಟ್ಟೆ ಸಮೀಕ್ಷೆ ಭವಿಷ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.