ನವದೆಹಲಿ: ದೆಹಲಿಯ ಎಎಪಿ ಸಚಿವ ರಾಜ್ ಕುಮಾರ್ ಆನಂದ್ ಅವರು ಚೀನಾಕ್ಕೆ ಹವಾಲ ಹಣ ಪಾವತಿ ಮಾಡಿದ್ದಾರೆ ಎಂದು ರೆವಿನ್ಯೂ ಗುಪ್ತಚರ ನಿರ್ದೇಶನಾಲಯವು (ಡಿಆರ್ಐ) ಆರೋಪಿಸಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಹೇಳಿದೆ.

ರಾಜ್ ಕುಮಾರ್ ಅವರು ಚೀನಾದಿಂದ ವಸ್ತುಗಳನ್ನು ಆಮದು ಮಾಡಿಕೊಂಡು, ₹ 7 ಕೋಟಿಯ ಕಸ್ಟಮ್ಸ್ ಸುಂಕವನ್ನು ವಂಚಿಸಿ ಹಣ ಪಾವತಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಡಿಆರ್ಐ ಅಧಿಕಾರಿಗಳು ನೀಡಿರುವ ದೂರಿನ ಆಧಾರದಲ್ಲೂ ರಾಜ್ಕುಮಾರ್ ವಿರುದ್ಧ ತನಿಖೆ ನಡೆಸುತ್ತಿದ್ದೇವೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ ಕುಮಾರ್ ಅವರಿಗೆ ಸೇರಿದ ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಗುರುವಾರ ಶೋಧ ಕಾರ್ಯ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.