ನವದೆಹಲಿ: ಸಂಗಮ್ ವಿಹಾರ್ ಪ್ರದೇಶದಲ್ಲಿ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಎಪಿ ಶಾಸಕ ದಿನೇಶ್ ಮೊಹಾನಿಯಾ ಮತ್ತು ಅವರ ಇಬ್ಬರು ಸಹಚರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಕ್ಷಿಣ ದೆಹಲಿಯ ಸಂಗಮ್ ವಿಹಾರ್ನಲ್ಲಿರುವ ಹಣ್ಣಿನ ಅಂಗಡಿ ಮಾಲೀಕ ನರೇಂದ್ರ ಸಿಂಗ್ ಅವರು ಶಾಸಕ ಮೊಹಾನಿಯಾ ಮತ್ತು ಅವರ ಸಹಚರರಾದ ತರಣ್ ರಾಜ್, ಸಂಜಯ್ ಗುಪ್ತಾ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶಾಸಕ ಮತ್ತು ಆತನ ಸಹಚರರು ಅಂಗಡಿ ಎದುರೇ ನನ್ನನ್ನು ಮನಬಂದಂತೆ ನಿಂದಿಸಿ, ಮನಸೋಇಚ್ಛೆ ಥಳಿಸಿದ್ದಾರೆ ಎಂದು ನರೇಂದ್ರ ಸಿಂಗ್ ದೂರಿನಲ್ಲಿ ವಿವರಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105(2), 126(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.