ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಆಯ್ಕೆಯಾಗಿರುವ ಶಾಸಕ ಭೂಪತ್ ಭಯಾನಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಇದನ್ನು ನಿರಾಕರಿಸಿರುವ ಭಯಾನಿ, ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದ್ದಾರೆ.

‘ಪ್ರಧಾನಿ ಮೋದಿ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಆದರೆ, ಎಎಪಿ ಜತೆ ನನಗೆ ಯಾವುದೇ ಅತೃಪ್ತಿ ಇಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ನಾನು ತೆಗೆದುಕೊಂಡಿಲ್ಲ. ನನ್ನ ಜನರು ಹಾಗೂ ಬೆಂಬಲಿಗರನ್ನು ಭೇಟಿ ಮಾಡಿದ ಬಳಿಕವಷ್ಟೇ ನಿರ್ಧಾರ
ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ನಾನು ಎಎಪಿಯಲ್ಲೇ ಇದ್ದೇನೆ’ ಎಂದು ಭೂಪತ್ ಭಯಾನಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.