ನವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ.

ದುರ್ಗೇಶ್ ಪಾಠಕ್ ಸೇರಿದಂತೆ ಇತರೆ ಆರೋಪಿಗಳಿಗೆ ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇತರೆ ಷರತ್ತುಗಳನ್ನು ಪೂರೈಸುವಂತೆ ನ್ಯಾಯಾಲಯ ಆದೇಶಿಸಿದೆ.

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಇತರ ಆರೋಪಿಗಳನ್ನು ನ್ಯಾಯಾಲಯಲ್ಲೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25ರವರೆಗೆ ವಿಸ್ತರಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.