ನವದೆಹಲಿ: ತಿಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಸಂಚು ನಡೆಯುತ್ತಿದೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಜ್ರಿವಾಲ್ ಆರೋಗ್ಯದ ವಿಚಾರದಲ್ಲಿ ಬಿಜೆಪಿಗರು ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ಯಾವಾಗ, ಏನು ಬೇಕಾದರೂ ಆಗಬಹುದು ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ.

‘ಆರಂಭದಲ್ಲಿ ಕೇಜ್ರಿವಾಲ್ ಅವರು ಸಿಹಿ ತಿಂದು ಸಕ್ಕರೆ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಗರು ಹೇಳುತ್ತಿದ್ದರು. ಆದರೆ, ಈಗ ಕೇಜ್ರಿವಾಲ್ ಅವರು ಸರಿಯಾಗಿ ಆಹಾರ ಸೇವಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಕೇಜ್ರಿವಾಲ್ಗೆ ಬೆದರಿಕೆ ಹಾಕಲಾಗುತ್ತಿದೆ ಎಂಬುದು ಸ್ಪಷ್ಟ’ ಎಂದು ಸಿಂಗ್ ತಿಳಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ಅವರು ಬೇಕೆಂದೇ ವೈದ್ಯರ ಸಲಹೆಯಂತೆ ಔಷಧ ಮತ್ತು ಆಹಾರ ಸೇವಿಸುತ್ತಿಲ್ಲ ಎಂದು ಅಲ್ಲಿಯ ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಆರೋಪಿಸಿದ್ದರು.

ಕೇಜ್ರಿವಾಲ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರು ನೀಡಿರುವ ವರದಿ ಆಧರಿಸಿ ದೆಹಲಿಯ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಸಕ್ಸೇನಾ ಅವರು ಪತ್ರ ಬರೆದಿದ್ದಾರೆ. ಕೇಜ್ರಿವಾಲ್ಗೆ ಮನೆಯಲ್ಲಿ ತಯಾರಾದ ಆಹಾರವನ್ನು ಒದಗಿಸಲಾಗುತ್ತಿದೆ. ಆದರೂ ಬೇಕೆಂದೇ ಕಡಿಮೆ ಕ್ಯಾಲೊರಿ ಆಹಾರ ಸೇವಿಸುತ್ತಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದರು.

ಸಂಜಯ್ ಸಿಂಗ್ ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.