ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Haryana Polls | 9 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಳಿಸಿದ ಎಎಪಿ

Published : 10 ಸೆಪ್ಟೆಂಬರ್ 2024, 6:45 IST
Last Updated : 10 ಸೆಪ್ಟೆಂಬರ್ 2024, 6:45 IST
ಫಾಲೋ ಮಾಡಿ
Comments

ನವದೆಹಲಿ: ಮುಂಬರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಒಂಬತ್ತು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷವು (ಎಎಪಿ) ಇಂದು (ಮಂಗಳವಾರ) ಬಿಡುಗಡೆಗೊಳಿಸಿದೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾತುಕತೆ ಮುರಿದು ಬಿದ್ದ ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಎಎಪಿ ಸೋಮವಾರ ಘೋಷಿಸಿತ್ತು. ಇದರ ಬೆನ್ನಲ್ಲೇ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೂ ಬಿಡುಗಡೆಗೊಳಿಸಿತ್ತು.

ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿಬರದ ಕಾರಣ ಮಾತುಕತೆ ಮುರಿದು ಬಿದ್ದಿದೆ.

'ನಾವು ಕಾಂಗ್ರೆಸ್ ಜೊತೆ ಮೈತ್ರಿಗಾಗಿ ಸಾಕಷ್ಟು ಸಮಯ ಕಾದಿದ್ದೇವೆ. ಈಗ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಎಲ್ಲ 90 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಬಿಜೆಪಿ ಸರ್ಕಾರದ ಪತನವೇ ನಮ್ಮ ಗುರಿಯಾಗಿದೆ' ಎಂದು ಎಎಪಿ ಹರಿಯಾಣ ಘಟಕದ ಅಧ್ಯಕ್ಷ ಸುಶೀಲ್‌ ಗುಪ್ತಾ ತಿಳಿಸಿದ್ದಾರೆ.

90 ಸದಸ್ಯ ಬಲದ ಹರಿಯಾಣದ ವಿಧಾನಸಭೆಗೆ ಅಕ್ಟೋಬರ್‌ 5ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 12ಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

2019ರಲ್ಲಿ 46 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಎಪಿಗೆ, ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT