ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರನ್ನೊಳಗೊಂಡ ಹೈಕೋರ್ಟ್ನ ರಜಾ ಕಾಲದ ಏಕ ಸದಸ್ಯ ಪೀಠ, ಪ್ರಕರಣ ಸಂಬಂಧ ನ್ಯಾಯಾಲಯದ ಮುಂದಿಟ್ಟ ಸಾಕ್ಷ್ಯಗಳು ಮತ್ತು ವಾದದ ಕುರಿತಂತೆ ಜಾರಿ ನಿರ್ದೇಶನಾಲಯವನ್ನು ಪ್ರಶಂಸಿಸಿದೆ. ಜಾಮೀನು ನೀಡುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯ ಈ ವಿಷಯಗಳನ್ನು ಪರಿಗಣಿಸಿಲ್ಲ ಎಂದಿದೆ.

ಅಲ್ಲದೆ, ವಿಚಾರಣಾ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದಿಸಲು ಇ.ಡಿಗೆ ಸಾಕಷ್ಟು ಅವಕಾಶವನ್ನು ನೀಡಬೇಕಾಗಿತ್ತು. ಹಾಗಾಗಿ, ದೋಷದಿಂದ ಕೂಡಿದ ಜಾಮೀನು ಆದೇಶಕ್ಕೆ ತಡೆ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ನಾವು ಒಪ್ಪುವುದಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಎಎಪಿ ಪ್ರತಿಕ್ರಿಯಿಸಿದೆ.
.ಕೇಜ್ರಿವಾಲ್ಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.