ಚಂಡೀಗಢ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆ ಎಎಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದ್ದಾರೆ.

ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಎಎಪಿ ಮತ್ತು ಕಾಂಗ್ರೆಸ್ ಮಾತುಕತೆ ನಡೆಸುತ್ತಿರುವಾಗಲೇ ಪಂಜಾಬ್ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.

ಏತನ್ಮಧ್ಯೆ ಚಂಡೀಗಢ ಮೇಯರ್ ಚುನಾವಣೆಗಾಗಿ ಎಎಪಿ– ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿವೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾನ್, ‘ಒಂದು ಲೋಕಸಭಾ ಕ್ಷೇತ್ರಕ್ಕೆ ಎಎಪಿಯಿಂದಲೇ ಮೂರರಿಂದ ನಾಲ್ಕು ಸಂಭಾವ್ಯ ಅಭ್ಯರ್ಥಿಗಳಿದ್ದಾರೆ. ಸಮೀಕ್ಷೆಗಳನ್ನು ನಡೆಸುವ ಮುಖಾಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ನಾವು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದರು.

ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಕೂಡ ಒಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.