ನವದೆಹಲಿ: ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಬೆಳಗಿನ ಜಾವ ಅತಿಶಿ ಆರೋಗ್ಯ ಹದಗೆಟ್ಟಿದ್ದು ಲೋಕ್ ನಾಯಕ್ ಜಯ ಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೀಘ್ರ ಚೇತರಿಕೆಗಾಗಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಎಪಿ ತಿಳಿಸಿದೆ.

ಜೂನ್ 21ರಂದು ಅತಿಶಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಅತಿಶಿ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಎಪಿ,‘ಅವರು ಕಳೆದ ಐದು ದಿನಗಳಿಂದ ಆಹಾರ ಸೇವಿಸಲಿಲ್ಲ. ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವು ತೀವ್ರವಾಗಿ ಕುಸಿದಿದೆ’ ಎಂದು ತಿಳಿಸಿದೆ.

ದೆಹಲಿಗೆ ಹರಿಯಾಣ ಸರ್ಕಾರ ದಿನಕ್ಕೆ 100 ಮಿಲಿಯನ್ ಗ್ಯಾಲನ್ (MGD) ನೀರನ್ನು ಬಿಡುಗಡೆ ಮಾಡದ ಕಾರಣ ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಬಿಕ್ಕಟ್ಟು ಉಂಟಾಗಿದೆ ಎಂದು ಎಎಪಿ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.