ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ ಮಾನ್ ಅವರುಪಂಜಾಬ್ ಮುಖ್ಯಮಂತ್ರಿಯಾಗಿ ಮಾರ್ಚ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರುವ ಮಾನ್, ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿಯೇ ಭೇಟಿ ಮಾಡಿದ ಮಾನ್, ಕೇಜ್ರಿವಾಲ್ ಪಾದ ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಉಪಸ್ಥಿತರಿದ್ದರು.

Moment of the day ❤️

When Punjab's CM-elect @BhagwantMann met AAP's National Convenor @ArvindKejriwal pic.twitter.com/63u3YXTWbN
— AAP (@AamAadmiParty) March 11, 2022

ಭಗವಂತ ಮಾನ್ ಅವರು ಅರವಿಂದ ಕೇಜ್ರಿವಾಲ್ ಅವರೊಂದಿಗೆ ಮಾರ್ಚ್ 13 ರಂದು ಅಮೃತಸರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:Punjab Results| ಭಗತ್ ಸಿಂಗ್ ಊರಲ್ಲಿ ಪ್ರಮಾಣವಚನ, ರಾಜಭವನದಲ್ಲಲ್ಲ: ಭಗವಂತ ಮಾನ್

ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಕೇವಲ 18 ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಬಿಜೆಪಿ ಎರಡು ಮತ್ತು ಶಿರೋಮಣಿ ಅಕಾಲಿದಳ (ಎಸ್ಎಡಿ) ಮೂರು ಕ್ಷೇತ್ರಗಳಲ್ಲಿ ಜಯ ಕಂಡಿವೆ. ಬಹುಜನ ಸಮಾಜವಾದಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಒಂದೊಂದು ಕಡೆ ಗೆಲುವು ಸಾಧಿಸಿದ್ದಾರೆ.

2017ರ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು. ಎಸ್ಎಡಿ 17, ಬಿಜೆಪಿ 3 ಹಾಗೂ ಪಕ್ಷೇತರರು 2 ಕ್ಷೇತ್ರಗಳಲ್ಲಿ ಗೆದ್ದಿದ್ದರು. 20 ಕಡೆ ಗೆಲುವಿನ ಖಾತೆ ತೆರೆದಿದ್ದ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

AAP's Punjab CM candidate Bhagwant Mann to take oath on March 16. He has invited Delhi CM Arvind Kejriwal for the swearing-in ceremony.

He will hold a roadshow in Amritsar on March 13 along with Delhi CM and party's national convener Arvind Kejriwal

(File pic) pic.twitter.com/EmPcEPvq0J
— ANI (@ANI) March 11, 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.