ಕೋಲ್ಕತ್ತ: ತನ್ನ ಸೋದರಳಿಯ, ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಶನಿವಾರ ನೇಮಕ ಮಾಡಿದ್ದಾರೆ.

ಟಿಎಂಸಿ ಹಿರಿಯ ಮುಖಂಡ ಪಾರ್ಥ ಚಟರ್ಜಿ ಅವರು ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ‘ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆಯನ್ನು ಮಾತ್ರ ನೀಡಬೇಕು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಅದಕ್ಕೆ ಕೋರ್ ಕಮಿಟಿಯು ಅನುಮೋದನೆ ನೀಡಿದೆ’ ಎಂದೂ ಹೇಳಿದರು.

ಈ ಹಿಂದೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಸುಬ್ರತಾ ಬಕ್ಷಿ ಅವರು ನಿರ್ವಹಿಸಿದ್ದರು. ನಟಿ ಹಾಗೂ ಟಿಎಂಸಿ ನಾಯಕಿ ಸಯೋನಿ ಘೋಷ್ ಅವರನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದಕ್ಕೂ ಮುನ್ನ ಅಭಿಷೇಕ್ ಈ ಹುದ್ದೆ ನಿರ್ವಹಿಸುತ್ತಿದ್ದರು.

ವಿಧಾನಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಮತ್ತು ಈಗ ಪಕ್ಷಕ್ಕೆ ಹಿಂದಿರುಗಲು ಬಯಸುತ್ತಿರುವವರ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ’ ಎಂದು ಪಾರ್ಥ ಚಟರ್ಜಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.