ನವದೆಹಲಿ: ದೆಹಲಿಯಲ್ಲಿನ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹರ್ ಹುಸೇನ್ ಅವರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಈಶಾನ್ಯ ದೆಹಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹೀರ್ ಹುಸೇನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕೊಲೆ ಪ್ರಕರಣದಲ್ಲಿಮಂಗಳವಾರವಷ್ಟೇ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಹುಸೇನ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಗುಪ್ತಚರ ಅಧಿಕಾರಿ ಕೊಲೆ ಆರೋಪ: ಕಾರ್ಪೊರೇಟರ್ ತಾಹಿರ್ಗೆ ಎಎಪಿ ಅಮಾನತು ಶಿಕ್ಷೆ

ಹತ್ಯೆಯ ಹಿಂದೆ ತಾಹೀರ್ ಕೈವಾಡ ಇದೆ ಎಂದು ಅಂಕಿತ್ ಅವರ ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಎಪಿಯು ತಾಹೀರ್ ಹುಸೇನ್‌ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಆದೇಶ ಹೊರಡಿಸಿತ್ತು.

ತಾಹೀರ್ ಅವರ ಮಾಲೀಕತ್ವದ ಐದು ಅಂತಸ್ತಿನ ಕಟ್ಟಡದ ತಾರಸಿಯಿಂದ ಕಲ್ಲು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದರು. ಪೊಲೀಸರು ತಾಹಿರ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನಿಂದ ತಾಹೀರ್ ಕಣ್ಮರೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.