ನವದೆಹಲಿ: ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 272 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದ ಒಟ್ಟಾರೆ ಪ್ರಕರಣಗಳು 2,990ಕ್ಕೆ ಇಳಿಕೆಯಾಗಿವೆ ಎಂದು ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಈ ಅವಧಿಯಲ್ಲಿ ಯಾವುದೇ ಸಾವು ದಾಖಲಾಗಿಲ್ಲ.
.BSY ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ: ಯತ್ನಾಳ.
2023ರ ಡಿಸೆಂಬರ್ 5ರ ಹೊತ್ತಿಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿತ್ತು. ಆದರೆ ಶೀತ ಹವಾಗುಣದಿಂದಾಗಿ ಹೊಸ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿತ್ತು. ಡಿಸೆಂಬರ್ 31ರಂದು 841 ಪ್ರಕರಣಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಇರುವ ಸಕ್ರಿಯ ಪ್ರಕರಣಗಳ ಪೈಕಿ ಶೇ 92ರಷ್ಟು ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
.ಕೋವಿಡ್ | ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆ ಮೀಸಲು : ಸಚಿವ ಶರಣ ಪ್ರಕಾಶ ಪಾಟೀಲ .
2020ರ ಆದಿಯಲ್ಲಿ ಕೋವಿಡ್ ಸಾಂಕ್ರಮಿಕ ಶುರುವಾದ ಬಳಿಕ ದೇಶದಲ್ಲಿ ಈವರೆಗೆ 4.5 ಕೋಟಿ ಮಂದಿಗೆ ಸೋಂಕು ತಗುಲಿದ್ದು, 5.3 ಲಕ್ಷ ಜನರು ಸಾವಿಗೀಡಾಗಿದ್ದಾರೆ. 4.4 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 220.67 ಕೋಟಿ ಡೋಸ್ ಲಸಿಕೆಗಳನ್ನು ವಿತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.