ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ ಪ್ರಕರಣ: ಎಸ್‌ಐಟಿಯಿಂದ ಮಲಯಾಳಂ ನಟ ಸಿದ್ದಿಕ್‌ ವಿಚಾರಣೆ

Published : 7 ಅಕ್ಟೋಬರ್ 2024, 7:04 IST
Last Updated : 7 ಅಕ್ಟೋಬರ್ 2024, 7:04 IST
ಫಾಲೋ ಮಾಡಿ
Comments

ತಿರುವನಂತಪುರಂ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ನಗರದ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಸಿದ್ದಿಕ್‌ ಅವರನ್ನು ಐಪಿಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಿದ್ದಿಕ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಸಿಕ್ಕಿತ್ತು.

2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹಲವಾರು ಹೈ ಪ್ರೊಫೈಲ್‌ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT