ಕೋಲ್ಕತ್ತ: ‘ಪಶ್ಚಿಮ ಬಂಗಾಳದಲ್ಲಿ ಅರಾಜಕತೆಯ ಸ್ಥಿತಿ ತಲೆದೂರಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ತಮ್ಮ ಮಧ್ಯ ಪ್ರವೇಶದ ಅಗತ್ಯ ಇದೆ’ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ಚೌಧರಿ ಅವರು, ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ತಮ್ಮ ಪಕ್ಷದ ಕಾರ್ಯಕರ್ತರ ಮೇಲಿನ ದಾಳಿಗಳನ್ನು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ರಾಜ್ಯದ ಸಾರ್ವಜನಿಕ ಜೀವನದಲ್ಲಿ ನಾಗರಿಕತೆ, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳಲು ತಮ್ಮ ಮಧ್ಯಪ್ರವೇಶದ ಅಗತ್ಯ ಇದೆ ಎಂದು ಭಾವಿಸಿದ್ದೇನೆ. ರಾಜ್ಯದಲ್ಲಿನ ಹಿಂಸಾಚಾರಗಳಿಂದ ಹಲವು ಅಮಾಯಕರು ಜೀವ ಕಳೆದುಕೊಂಡಿದ್ದರೆ, ಹಲವರು ಜೈಲು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.