ತಿರುವನಂತಪುರ: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ (ಸ್ವೈನ್ ಫಿವರ್) ಪತ್ತೆಯಾಗಿದೆ.

ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿಯ ಎರಡು ಸಾಕಣೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಕಿಪಾಕ್ಸ್: ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆ

ಫಾರ್ಮ್ವೊಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಯಾಂಪಲ್ ಪರೀಕ್ಷೆಗಾಗಿ ಭೋಪಾಲಕ್ಕೆ ರವಾನಿಸಲಾಗಿತ್ತು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಭೋಪಾಲದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಕೇಂದ್ರದಲ್ಲಿ ಮಾದರಿಗಳನ್ನು ಪರೀಕ್ಷಿಸಿದ ಬಳಿಕ ಎರಡು ಫಾರ್ಮ್ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿವೆ.

ಈ ಹಿನ್ನೆಲೆಯಲ್ಲಿ ಎರಡನೇ ಫಾರ್ಮ್ನಲ್ಲಿದ್ದ 300 ಹಂದಿಗಳನ್ನು ಕೊಲ್ಲಲು ನಿರ್ದೇಶನ ನೀಡಲಾಗಿದೆ. ಅಲ್ಲದೆ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಬಿಹಾರ ಹಾಗೂ ಈಶಾನ್ಯದ ಕೆಲವು ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ಈಗಾಗಲೇ ವರದಿಯಾಗಿದೆ. ಇದು ದೇಶೀಯ ಹಂದಿಗಳ ಮೇಲೆ ಪರಿಣಾಮ ಬೀರುವ ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಕಾಯಿಲೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.